ಮಂಗಳೂರು, ಡಿ.4: ಚಿಕ್ಕಮಗಳೂರಿನಲ್ಲಿ ವಕೀಲಪ್ರೀತಂ ಮೇಲೆನಡೆದಿರುವ ಪೊಲೀಸ್ ದೌರ್ಜನ್ಯ ಪ್ರಕರಣವನ್ನು ಖಂಡಿಸಿ ಸೋಮವಾರ ಮಂಗಳೂರಿನಲ್ಲಿ ವಕೀಲರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ನ್ಯಾಯಾಲಯದ ಆವರಣದಲ್ಲಿ ಪ್ರತಿಭಟನೆ ನಡೆಸಿದ ವಕೀಲರು, ದೌರ್ಜನ್ಯ ನಡೆಸಿದ ಪೊಲೀಸರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಇಲಾಖಾ ಆಂತರಿಕ ತನಿಖೆ ನಡೆಸಬೇಕು. ವಕೀಲರಿಗೆ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದರು.
ಸಂಘದ ಉಪಾಧ್ಯಕ್ಷ ಹಾಗೂ ಹಿರಿಯ ವಕೀಲ ಮನೋರಾಜ್ ರಾಜೀವ್ ಮಾತನಾಡಿ, ಹಲ್ಲೆ ನಡೆಸಿದ ಆರೋಪಿಗಳು ಕರ್ತವ್ಯಕ್ಕೆ ಅಡ್ಡಿ ಪಡಿಸಿದರೆಂದು ಘಟನೆ ನಡೆದ ಎರಡು ದಿನಗಳ ಬಳಿಕ ವಕೀಲರ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸಿದ್ದಾರೆ. ಪೊಲೀಸರು ದಿಢೀರನೆ ಪ್ರತಿಭಟನೆ ನಡೆಸಿ ಕಾನೂನು ಸುವ್ಯವಸ್ಥೆಯನ್ನು ಅಣಕಿಸುವಂತೆ ಮಾಡಿದ್ದಾರೆ ಮತ್ತು ಡಿವೈಎಸ್ಪಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಈ ಎಲ್ಲ ವಿಚಾರಗಳ ಬಗ್ಗೆ ಆಂತರಿತ ತನಿಖೆ ನಡೆಸಿ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸರಕಾರವನ್ನು ಆಗ್ರಹಿಸಿದರು.
ಹಿರಿಯ ವಕೀಲ ಶಂಭು ಶರ್ಮ ಮಾತನಾಡಿ ದೌರ್ಜನ್ಯ ಎಸಗಿದ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ವಕೀಲರ ರಕ್ಷಣಾ ಕಾಯ್ದೆ ಜಾರಿಗೊಳ್ಳಬೇಕು
ಇದರಲ್ಲಿ ಅದ್ಭುತ ವಿಚಾರಗಳಿವೆ! ಹಾಗೂ ಇದು ನಮ್ಮನ್ನು ಪ್ರಾಥಮಿಕ ಹಂತದ ಹೋರಾಟಕ್ಕೆ ಒಯ್ಯುವುದು. ನ್ಯಾಯದ ಪ್ರಾಪ್ತಿಯಾಗದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸಬೇಕು ಎಂದು ಸಂಘದ ಅಧ್ಯಕ್ಷ ಪೃಥ್ವಿರಾಜ್ ರೈ ಸೂಚಿಸಿದ್ದಾರೆ. ಕಾರ್ಯದರ್ಶಿ ಶ್ರೀಧರ ಎಣ್ಮಕಜೆ ಈ ಸಂದರ್ಭದಲ್ಲಿ ತನಿಖೆಯ ಬಗ್ಗೆ ಮಾತನಾಡಿದ್ದಾರೆ. ನರಸಿಂಹ ಹೆಗ್ಡೆ, ಟಿ.ನಾರಾಯಣ ಪೂಜಾರಿ, ಎಂ.ಆರ್.ಬಲ್ಲಾಳ್, ಬಿ.ಸುಬ್ಬಯ ರೈಮತ್ತಿತರರು ಪಾಲ್ಗೊಂಡಿದ್ದಾರೆ.
---
